ಬೆಂಗಳೂರು, ಜುಲೈ, 4,2025 (www.justkannada.in): ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಸಂಬಂಧ ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಾಕಾಶ ಬೇಕಿದ್ದು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಎಂ ಎಲ್ ಸಿ ರವಿಕುಮಾರ್ ವಿರುದ್ದ ಪೊಲೀಸ್ ಕ್ರಮ
ಎಂ ಎಲ್ ಸಿ ರವಿಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸೂಕ್ತ ಪೊಲೀಸ್ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Key words: Land Acquisition, Meeting, Farmers, CM Siddaramaiah