ಸಿಎಂ ಸಿದ್ದರಾಮಯ್ಯ ವಿರುದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ

ಬೆಂಗಳೂರು,ಜುಲೈ,11,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಜೆಪಿ ವಿರುದ್ದ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ದ  ಬಿಜೆಪಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿತ್ತು.

ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ರಾಜ್ಯ ಘಟಕ ಹೂಡಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಆದೇಶಿಸಿದ್ದಾರೆ.

2023ರ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಲಾದ ಜಾಹೀರಾತಿಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಇದರಲ್ಲಿ ಕಾಂಗ್ರೆಸ್ ಪಕ್ಷವು “ಭ್ರಷ್ಟಾಚಾರ ದರ ಕಾರ್ಡ್” ಅನ್ನು ಪ್ರಕಟಿಸುವ ಮೂಲಕ ಬಿಜೆಪಿಯನ್ನು ಮಾನಹಾನಿ ಮಾಡಿದೆ ಎಂದು ಆರೋಪಿಸಲಾಗಿತ್ತು.vtu

Key words: High Court, stays, criminal, defamation case, against, CM Siddaramaiah