BJP ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಬಿಜೆಪಿ ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ, ಮೀಸಲಾತಿ ಪರವಾಗಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಎಲ್ಲಾ ರಾಜ್ಯ ಮತ್ತು ರಾಷ್ಟ್ರೀಯ ಒಬಿಸಿ ನಾಯಕರ ಇವತ್ತಿನ ಮೊದಲ ಸಭೆ‌ ಅರ್ಥಪೂರ್ಣವಾಗಿ ನಡೆದಿದೆ. ನನ್ನ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಸುವಂತೆ ಸಲಹಾ ಸಮಿತಿ ಅಧ್ಯಕ್ಷರು ಸೂಚಿಸಿದ್ದರಿಂದ ನನ್ನ ಅಧ್ಯಕ್ಷತೆಯಲ್ಲೇ ಸಭೆ ನಡೆದಿದೆ . ಮುಂದುವರೆದ ಸಭೆ ನಾಳೆ ನಡೆಯುತ್ತದೆ. ನಾಳೆ 10 ಗಂಟೆಗೆ ಸಭೆ ನಡೆಯಲಿದೆ. ಸಭೆ ಬಳಿಕ ವಿವರವಾಗಿ ಮಾಹಿತಿ ನೀಡುತ್ತೇವೆ ಎಂದರು.

ಇದೇ ವೇಳೆ ಬಿಜೆಪಿ ವಿರುದ್ದ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ, ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ. ಬಿಜೆಪಿ ನಿರಂತರವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುಕ್ಕೆ ಇಡೀ ದೇಶ ಸಾಕ್ಷಿಯಾಗಿದೆ ಎಂದರು.vtu

Key words: BJP , social justice, reservation, CM, Siddaramaiah