ಬೆಂಗಳೂರು,ಜುಲೈ,16,2025 (www.justkannada.in): ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬದ್ಧರಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ತೆಗೆದುಕೊಳ್ಲುವ ನಿರ್ಧಾರವನ್ನು ನಾನು ಮತ್ತು ಡಿ.ಕೆ.ಶಿವಕುಮಾರ್ ಅನುಸರಿಸುತ್ತೇವೆ.
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕುರಿತ ವದಂತಿ, ಚರ್ಚೆ ವಿಚಾರ ಇಲ್ಲಿ ಅಪ್ರಸ್ತುತ. ಈ ವಿಚಾರ ಇಲ್ಲಿನ ಸಭೆಗೆ ಸಂಬಂಧಿಸಿದ್ದಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳತ್ತದೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Key words: DK Shivakumar, decision, high command, CM Siddaramaiah