ಬೆಂಗಳೂರು,ಜುಲೈ,17,2025 (www.justkannada.in): ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಅತ್ಮವಂಚನೆಯನ್ನು ಮಾತ್ರವಲ್ಲ, ದುರಹಂಕಾರವನ್ನೂ ಸೂಚಿಸುತ್ತದೆ. ದಲಿತ ಮತ್ತು ಹಿಂದುಳಿದ ಜಾತಿಗಳ ಬಗ್ಗೆ ನಿಮಗೆ ಅಷ್ಟೊಂದು ಅಕ್ಕರೆ, ಕಾಳಜಿಗಳಿದ್ದರೆ ಗೋವಿಂದ ಕಾರಜೋಳ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟುಕೊಟ್ಟು ಅವರನ್ನೇ ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಿಸಿಬಿಡಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಎಸೆದರು.
ಮಾಧ್ಯಮ ಹೇಳಿಕೆ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ ಅವರಿಗೆ ಓದುವ ಅಭ್ಯಾಸ ಇದ್ದರೆ ಈ ದೇಶದ ಹಿಂದುಳಿದ ಜಾತಿಗಳು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಭಾರತೀಯ ಜನತಾ ಪಕ್ಷ ಯಾವ ಯಾವ ಕಾಲದಲ್ಲಿ ಹೇಗೆಲ್ಲಾ ನಡೆಸಿಕೊಂಡಿದೆ ಎಂಬ ಇತಿಹಾಸವನ್ನು ಓದಿ ತಿಳಿದುಕೊಳ್ಳಲಿ.
ಬಂಡಾರುಲಕ್ಷ್ಮಣ ಎಂಬ ಅಮಾಯಕ ದಲಿತ ನಾಯಕನನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಜೈಲಿಗೆ ತಳ್ಳಿದ್ದು ಮಾತ್ರವಲ್ಲ, ಅದೇ ಕೊರಗಿನಲ್ಲಿ ಅವರು ಸಾಯುವಂತೆ ಮಾಡಿದವರು ಯಾರು? ಮಾತೆತ್ತಿದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರನ್ನು ಮೆರೆಸುವ ಬಿಜೆಪಿ ಅವರನ್ನೇ ಪ್ರಧಾನಮಂತ್ರಿ ಯಾಕೆ ಮಾಡಿಲ್ಲ? ಎ.ಪಿ.ಜೆ ಅಬ್ದುಲ್ ಕಲಾಮ್ ಅವರನ್ನು ರಾಷ್ಟ್ರಪತಿ ಮಾಡಿದ್ದೇ ಸಾಧನೆ ಎಂದು ಹೇಳಿಕೊಳ್ಳುವವರು, ಪ್ರಸಕ್ತ ಲೋಕಸಭೆಯಲ್ಲಿ ಬಿಜೆಪಿಗೆ ಸೇರಿರುವ ಒಬ್ಬನೇ ಒಬ್ಬ ಮುಸ್ಲಿಂ ಸಂಸದ ಯಾಕೆ ಇಲ್ಲ? ಕಳೆದ ಲೋಕಸಭಾ ಚುನಾವಣೆಯಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಎನ್ನುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವೇ? ಎಂದು ಚಾಟಿ ಬೀಸಿದರು.
ಹಿಂದುಳಿದ ನಾಯಕರನ್ನು ಬಿಜೆಪಿ ಹೇಗೆ ನಡೆಸಿಕೊಳ್ಳುತ್ತಾ ಬಂದಿದೆ ಎನ್ನುವುದಕ್ಕೆ ರಾಜ್ಯದ ಹಿಂದುಳಿದ ಜಾತಿಗಳ ನಾಯಕ ಎಸ್.ಬಂಗಾರಪ್ಪನವರೇ ಸಾಕ್ಷಿ. ಬಂಗಾರಪ್ಪನವರನ್ನು ನಿಮ್ಮ ತಂದೆ ಬಿ.ಎಸ್. ಯಡಿಯೂರಪ್ಪನವರು ಮುಗಿಸಿದರೆ, ಅವರ ಮಗ ಕುಮಾರ್ ಬಂಗಾರಪ್ಪನವರ ರಾಜಕೀಯವನ್ನು ನೀವು ಮುಗಿಸಲು ಹೊರಟಿದ್ದೀರಿ. ಇದರ ವಿವರವನ್ನು ಅವರು ನೀಡುತ್ತಲೇ ಇದ್ದಾರೆ. ಬಂಗಾರಪ್ಪನವರಿರಲಿ, ನರೇಂದ್ರ ಮೋದಿ ಅವರೇ ಇರಲಿ, ಎಲ್ಲಿಯ ವರೆಗೆ ಇವರು ವರ್ಣವ್ಯವಸ್ಥೆ ಆಧಾರಿತ ಹಿಂದುತ್ವದ ಅಜೆಂಡಾಕ್ಕೆ ತಲೆ ಬಗ್ಗಿಸುತ್ತಾ ಇರುತ್ತಾರೋ ಅಲ್ಲಿಯ ವರೆಗೆ ಮಾತ್ರ ಅವರ ತಲೆಗಳು ಸುರಕ್ಷಿತ. ಇದು ಮೋದಿಯವರಿಗೂ ತಿಳಿದಿರಲಿ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಒಬ್ಬ ದಲಿತ ನಾಯಕನಿಗೆ ಬಿಟ್ಟುಬಿಡಿ
ವಿಜಯೇಂದ್ರ ಅವರೇ, ದಲಿತ ಮತ್ತು ಹಿಂದುಳಿದ ಜಾತಿಗಳ ಬಗ್ಗೆ ನಿಮಗೆ ಅಷ್ಟೊಂದು ಅಕ್ಕರೆ, ಕಾಳಜಿಗಳಿದ್ದರೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಒಬ್ಬ ದಲಿತ ನಾಯಕನಿಗೆ ಬಿಟ್ಟುಬಿಡಿ. ನಿಮಗೆ ಅನುಕೂಲವಾಗಲೆಂದು ಆ ಹೆಸರನ್ನು ನಾನೇ ಸೂಚಿಸುತ್ತೇನೆ. ದಲಿತ ನಾಯಕ ಗೋವಿಂದಪ್ಪ ಕಾರಜೋಳ ಅವರು ಇತ್ತೀಚೆಗೆ ನಿಮ್ಮ ಸಂಗಕ್ಕೆಬಿದ್ದು ಇತ್ತೀಚೆಗೆ ಏನೇನೋ ಮಾತನಾಡುತ್ತಿದ್ದಾರೆ. ಆದರೆ ನನ್ನ ಸಹದ್ಯೋಗಿಯಾಗಿದ್ದ ಅವರು ಮೂಲತ: ಸಜ್ಜನ ವ್ಯಕ್ತಿ. ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ದಮ್ಮು ತಾಕತ್ ಇದ್ದರೆ ಕಾರಜೋಳ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಅವರನ್ನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಬಿಡಿ ಎಂದು ಸವಾಲು ಹಾಕಿದರು. .
ಇಂತಹ ಒಳ್ಳೆಯ ಕೆಲಸವನ್ನು ನೀವು ಮಾಡುವುದೇ ಇಲ್ಲ ಎನ್ನುವುದು ನನಗೆ ಗೊತ್ತು. ಬೇರೆ ಪಕ್ಷಗಳಲ್ಲಿನ ದಲಿತ ನಾಯಕರ ಚಾರಿತ್ರ್ಯಹನನ ಮಾಡಲಷ್ಟೇ ಬಿಜೆಪಿ ತನ್ನ ದಲಿತ ನಾಯಕರನ್ನು ಬಳಸಿಕೊಳ್ಳುತ್ತದೆಯೇ ಹೊರತು, ಅವರಿಗೆ ಯಾವುದೇ ಗೌರವದ ಮತ್ತು ಪ್ರಮುಖ ಸ್ಥಾನಮಾನ ನೀಡುವುದಿಲ್ಲ.
ವಿಜಯೇಂದ್ರ ಅವರೇ, ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ? ಇದಕ್ಕೆ ಉತ್ತರ ಇದೆಯಾ ನಿಮ್ಮಲ್ಲಿ? ಎಂದು ಪ್ರಶ್ನಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರು ಮಾತ್ರವಲ್ಲ ದೇಶ ಮೆಚ್ಚುವ ಒಬ್ಬ ಮುತ್ಸದ್ದಿ ನಾಯಕ. ಶ್ರದ್ಧೆ, ಶ್ರಮ ಮತ್ತು ಜನಪಪರಕಾಳಜಿ ಮೂಲಕ ಅವರು ನಾಯಕರಾಗಿ ಬೆಳೆದಿದ್ದಾರೆಯೇ ಹೊರತು, ಎಂದೂ ದಲಿತ ಕಾರ್ಡ್ ಪ್ರದರ್ಶಿಸಿ ರಾಜಕೀಯ ಮಾಡಿಲ್ಲ. ಅವರ ಬೆಳವಣಿಗೆಗೆ ಯಾರ ಶಿಫಾರಸುಗಳ ಅಗತ್ಯವೂ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಮಂತ್ರಿ ಯಾರು ಆಗಬೇಕೆನ್ನುವುದನ್ನು ನಮ್ಮ ಪಕ್ಷ ನಿರ್ಧರಿಸುತ್ತದೆ. ಅದರ ಬಗ್ಗೆ ಬಿಜೆಪಿ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ.
ಮೋದಿಗೆ 75 ವರ್ಷ ತುಂಬುತ್ತಿದೆ: ಬಿಜೆಪಿಯ ಪ್ರಧಾನಮಂತ್ರಿ ಸ್ಥಾನಕ್ಕೆ ದಲಿತ ನಾಯಕನನ್ನು ಸೂಚಿಸಿ
ವಿಜಯೇಂದ್ರ ಅವರೇ ನೀವು ಯೋಚಿಸಬೇಕಾಗಿರುವುದು ನಿಮ್ಮ ಪಕ್ಷದ ಬಗ್ಗೆ. ಎಪ್ಪತ್ತೈದು ವರ್ಷ ತುಂಬಿರುವ ನರೇಂದ್ರ ಮೋದಿ ಅವರ ಪದಚ್ಯುತಿಯ ಸೂಚನೆಯನ್ನು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿದ್ದಾರೆ. ದಲಿತ ಪ್ರಧಾನಮಂತ್ರಿಯನ್ನು ಮಾಡಲು ಬಿಜೆಪಿಗೆ ಇದೊಂದು ಸದಾವಕಾಶ. ಆ ಪ್ರಯತ್ನ ನಿಮ್ಮಿಂದಲೇ ಶುರುವಾಗಲಿ. ಬೇರೆಯವರಿಗೆ ಬೋಧನೆ ಮಾಡುವ ಬದಲಿಗೆ ಬಿಜೆಪಿಯ ಪ್ರಧಾನಮಂತ್ರಿ ಸ್ಥಾನಕ್ಕೆ ಒಬ್ಬ ದಲಿತ ನಾಯಕನನ್ನು ನೀವೇ ಮೊದಲೇ ಸೂಚಿಸಿ ನಿಮ್ಮ ದಲಿತ ಪ್ರೇಮವನ್ನು ಸಾಬೀತುಪಡಿಸಿ. ಆ ಹೆಸರುಗಳು ಗೋವಿಂದಪ್ಪ ಕಾರಜೋಳ ಅವರೋ, ಛಲವಾದಿ ನಾರಾಯಾಣ ಸ್ವಾಮಿ ಅವರದ್ದಾಗಿದ್ದರೆ ಅವರನ್ನು ಅಭಿನಂದಿಸುವರಲ್ಲಿ ನಾನು ಮೊದಲಿಗನಾಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು.
ENGLISH SUMMARY..
Chief Minister Shri Siddaramaiah
Mr. B Y Vijayendra, the BJP State President who cannot even secure the stability of the very chair he occupies, has the audacity to advise the Congress on who should be our Prime Ministerial candidate. This is not just a display of his ignorance and self-deception, but also an exhibition of his arrogant entitlement.
If Mr. Vijayendra has even a habit of reading, let him acquaint himself with the history of how the BJP has treated the backward classes, Dalits, and minorities of this country. Let him reflect on the shameful episode of Bangaru Laxman, a Dalit leader whom the BJP elevated as the party’s national president only to disgrace him with corruption allegations and send him to jail, a humiliation that eventually led to his death. Who was responsible for that?
The BJP never fails to flaunt the name of President Droupadi Murmu. But why has the same BJP never projected her as the Prime Minister of this country? The party brags about making A.P.J. Abdul Kalam the President, yet can Mr. Vijayendra answer why the BJP, in the current Lok Sabha, does not have a single Muslim MP? Why was not even a single Muslim leader given a ticket in the last parliamentary election?
If evidence is needed on how BJP systematically undermines backward class leaders, look no further than Karnataka. S. Bangarappa, a prominent backward class leader, was politically finished by your father B.S. Yediyurappa. And now, Mr. Vijayendra, you are attempting to end the political career of his son, Kumar Bangarappa. Both father and son have made this their family mission.
Let me tell you, be it Bangarappa or Narendra Modi, their safety in BJP exists only as long as they remain subservient to the casteist Hindutva agenda. Mr. Modi must be aware of this uncomfortable truth himself.
Mr. Vijayendra, if you are truly concerned about the dignity of Dalits and backward classes, why don’t you relinquish your position as State BJP President and offer it to a Dalit leader? In case you are struggling to find a name, let me suggest one name, which is, Govind Karjol. Though he now parrots your party’s tunes, having worked with him, I can vouch that he is fundamentally a decent man. If you or your party have the courage and conviction, declare Karjol as BJP’s State President and your Chief Ministerial face for Karnataka.
But I know you won’t. BJP’s sole purpose is to use Dalit leaders to defame those in other parties while ensuring they never rise to positions of real power or respect within the BJP itself.
And why didn’t you or your father carry the basket of ‘Chaddis’ that was mockingly placed on Chalavadi Narayanaswamy’s head by caste bigots? Do you have an answer for that, Mr. Vijayendra?
Mallikarjun Kharge is not just the AICC President but a respected statesman of this country. His rise is not through playing a ‘Dalit card’ but through decades of dedication, integrity, and commitment to public service. His journey never needed any political patronage. And let me be very clear, in Congress, it is our party that decides who our Prime Ministerial candidate will be, not the BJP.
Instead of wasting your time talking about Congress, Mr. Vijayendra, reflect on your own party. The RSS Sarsanghchalak, Mohan Bhagwat, has already signalled the political retirement of Narendra Modi who is now 75. This is the BJP’s golden chance to make a Dalit the next Prime Minister. Let that initiative start with you. Rather than giving lectures to others, why don’t you propose a Dalit leader as BJP’s Prime Ministerial face? Whether it is Govind Karjol or Chalavadi Narayanaswamy, if you propose their names, I will be the first to congratulate you.
But I have no illusions. The BJP’s treatment of Dalits and backward classes has always been tokenistic. Your history speaks for itself and so does your hypocrisy.
Key words: CM Siddaramaiah, BJP, BY Vijayendra, CM Candidate