ಬೆಂಗಳೂರು, ಜುಲೈ, 31,2025 (www.justkannada.in): ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನ ಹಿಲ್ಟನ್ ಹೋಟೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಸಂಬಂಧ ಆಗಸ್ಟ್ 4 ರಂದು ರಾಹುಲ್ ಗಾಂಧಿ ಅವರು ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು.
ಎಲ್ಲ ಪ್ರತಿಭಟನೆ ಮಾಡಬೇಕೆಂಬುದನ್ನ ನಾವು ತೀರ್ಮಾನ ಮಾಡುತ್ತೇವೆ. ರಾಹುಲ್ ಗಾಂಧಿ ಕರ್ನಾಟಕದಲ್ಲಿ ಮತಗಳ್ಳತನದ ಬಗ್ಗೆ ದಾಖಲೆ ಪಡೆದುಕೊಂಡಿದ್ದಾರೆ. ಮಹದೇವಪುರ ರಾಜಾಜಿನಗರ ಕ್ಷೇತಗಳಲ್ಲಿ ಮತಗಳ್ಳತನ ಆಗಿದೆ. ಪ್ರತಿಭಟನೆ ಬಳಿಕ ಚುನಾವಣಾ ಅಧಿಕಾರಿಗಳಿಗೆ ದೂರು ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Key words: Vote, Illegal, Rahul Gandhi, evidence, CM Siddaramaiah