ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್‌ ಭೇಟಿ, ಪರಿಶೀಲನೆ

ಬೆಂಗಳೂರು, ಆಗಸ್ಟ್,6,2025 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ವಿಕ್ಟೋರಿಯಾ ಆಸ್ಪತ್ರೆಗೆ  ದಿಢೀರ್ ಭೇಟಿ  ನೀಡಿ ರೋಗಿಗಳ ಸಮಸ್ಯೆಗಳನ್ನು ಆಲಿಸಿ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಸಿಎಂ ಸಿದ್ದರಾಮಯ್ಯ  ಇದ್ದಕ್ಕಿಂದ್ದಂತೆ ಅನಿರೀಕ್ಷಿತವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರು. ಸಿಎಂ ದಿಢೀರ್ ಭೇಟಿಯಿಂದ  ಆಸ್ಪತ್ರೆಯಲ್ಲಿದ್ದ ವೈದ್ಯರು, ಸಿಬ್ಬಂದಿಗಳು ಅರೇ ಕ್ಷಣ ತಬ್ಬಿಬ್ಬಾದ ಘಟನೆ ನಡೆಯಿತು.

ಆಸ್ಪತ್ರೆ ವಾರ್ಡ್ ಗಳಿಗೆ ತೆರಳಿ ಖುದ್ದು ಪರಿಶೀಲನೆ ನಡೆಸಿದ ಸಿಎಂ  ಸಿದ್ದರಾಮಯ್ಯ , ಚಿಕಿತ್ಸಾ ಸೌಲಭ್ಯ, ಸಮಸ್ಯೆಗಳ ಬಗ್ಗೆ ರೋಗಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಿಎಂ ಸಿದ್ದರಾಮಯ್ಯಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌ ಸಾಥ್ ನೀಡಿದರು.

Key words: CM Siddaramaiah, surprise, visit , Victoria Hospital