ಬಿಜೆಪಿ ಚಾಮುಂಡಿ ಬೆಟ್ಟ ಚಲೋದಿಂದ ಹಿಂದುತ್ವ ಗಟ್ಟಿಯಾಗಲ್ಲ-ಸಿಎಂ ಸಿದ್ದರಾಮಯ್ಯ

ಮೈಸೂರು,ಸೆಪ್ಟಂಬರ್,1,2025 (www.justkannada.in): ಹಿಂದುತ್ವ ಗಟ್ಟಿಯಾಗುತ್ತದೆ ಎಂದು ಬಿಜೆಪಿಯವರು ಚಾಮುಂಡಿ ಬೆಟ್ಟ ಚಲೋ ನಡೆಸಲು ಪ್ಲಾನ್ ಮಾಡಿದ್ದಾರೆ. ಆದರೆ ಇದರಿಂದ ಹಿಂದುತ್ವ ಗಟ್ಟಿಯಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಮಾನವೀಯ ನಡವಳಿಕೆ ತೊರುವವರು ಹಿಂದೂಗಳಲ್ಲ.  ಮನುಷ್ಯತ್ವ ತೋರುವವರು ಹಿಂದೂಗಳು.  ಬಿಜೆಪಿಯವರು ದಸರಾದಲ್ಲೂ ರಾಜಕೀಯ ಮಾಡುತ್ತಿದ್ದಾರೆ.  ಅವರ ಮನೆಯೂ ರಾಜಕೀಯಕ್ಕೆ ಬೇಕಾದರೆ ಬಳಸಿಕೊಳ್ಳುತ್ತಾರೆ. ಸುಳ್ಳು ಹೇಳುವುದು ಬಿಟ್ಟು ಬಿಜೆಪಿಗೆ ಏನು ಗೊತ್ತು.  ಬಿಜೆಪಿ ಹೋರಾಟದಿಂದ ದಸರಾ ಮೇಲೆ ಕೆಟ್ಟ ಪರಿಣಾಮ ಬೀರಲ್ಲ ಹಿಂದೂಗಳೆಲ್ಲಾ ಬಿಜೆಪಿ ಜೊತೆ ಇಲ್ಲ  ಎಂದರು.

ಶ್ರೀ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಾರ ನಂಬಿಕೆ ಇಟ್ಟುಕೊಂಡಿದ್ದೇವೆ. ಹಿಂದೂ ಆಂದ್ರೆ ಅಪಪ್ರಚಾರ ಮಾಡುವುದಲ್ಲ ಸುಳ್ಳು ಹೇಳುವುದಲ್ಲ ಧರ್ಮಸ್ಥಳ ವಿಚಾರದಲ್ಲಿ ರಾಜಕಾರಣ ಮಾಡಿದವರು ಯಾರು  ಬಿಜೆಪಿಯವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೇನು ಬರಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Key words: BJP, Chamundi hill  Chalo, CM, Siddaramaiah