ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ಕಾರ್ಯಕ್ರಮವೊಂದರಲ್ಲಿ ಎಎಸ್ ಪಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈಎತ್ತಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆಯಾಗಿದೆ.
ಹೋರಾಟಗಾರ ಭೀಮಪ್ಪ ಗಡದ್ ಎಂಬುವವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆ ಮಾಡಿದ್ದಾರೆ. ಎಎಸ್ ಪಿ ನಾರಾಯಣ ಭರಮನಿ ಮೇಲೆ ಕೈ ಎತ್ತಿದ್ದ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ ಐಆರ್ ದಾಖಲಿಸಲು ನಿರ್ದೇಶನ ನೀಡಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಇತ್ತೀಚೆಗೆ ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶದ ವೇಳೆ ಬಿಜೆಪಿಯವರು ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಎಎಸ್ ಪಿ ನಾರಾಯಣ ಭರಮನಿ ಅವರ ವಿರುದ್ದ ಗರಂ ಆಗಿದ್ದ ಸಿಎಂ ಸಿದ್ದರಾಮಯ್ಯ ಕೈಎತ್ತಿದ್ದರು.
Key words: ASP, Case, Private complaint, filed , court, against, CM Siddaramaiah