Wednesday, September 23, 2026

BDA Apartments

Home Front Page ಪ್ರತ್ಯೇಕ ಅಪಘಾತ: ಮೃತ 14 ಮಂದಿಯ ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ಸಿಎಂ...

ಪ್ರತ್ಯೇಕ ಅಪಘಾತ: ಮೃತ 14 ಮಂದಿಯ ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜನವರಿ,22,2025 (www.justkannada.in): ಪ್ರತ್ಯೇಕ ಅಪಘಾತದಲ್ಲಿ ಮೃತಪಟ್ಟ 14 ಮಂದಿಯ ಕುಟುಂಬಗಳಿಗೆ ತಲಾ 3 ಲಕ್ಷ  ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.ಪ್ರತ್ಯೇಕ ಅಪಘಾತ: ಮೃತ 14 ಮಂದಿಯ ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ಸಿ...

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು.ಪ್ರತ್ಯೇಕ ಅಪಘಾತ lorry

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

Key words: CM Siddaramaiah, accident,   Rs 3 lakh, compensation