ಮೈಸೂರು, ಅಕ್ಟೊಬರ್,18,2025 (www.justkannada.in): ನಿನ್ನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಯಶಸ್ವಿ ಹಿನ್ನೆಲೆಯಲ್ಲಿ ಸದ್ಯದಲ್ಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉದ್ಯೋಗ ಮೇಳ ಆಯೋಜನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ನಿನ್ನೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಒಟ್ಟು 235 ಕಂಪನಿಗಳು,13,289 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಈ ಅಭ್ಯರ್ಥಿಗಳ ಪೈಕಿ 3,303 ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗಿತ್ತು. ಇದರಲ್ಲಿ 1,346 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಆಯ್ಕೆಯಾಗಿದ್ದಾರೆ. ಈ ಉದ್ಯೋಗ ಮೇಳೆ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಉತ್ಸುಕಗೊಂಡಿರುವ ರಾಜ್ಯ ಸರ್ಕಾರ ರಾಜ್ಯ ಎಲ್ಲಾ ಜಿಲ್ಲೆಗಳಲ್ಲೂ ಉದ್ಯೋಗ ಮೇಳ ಆಯೋಜಿಸುವುದಾಗಿ ತಿಳಿಸಿದೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತ ಸಿಎಂ ಸಿದ್ದರಾಮಯ್ಯ ಈ ವಿಚಾರ ತಿಳಿಸಿದರು.
ಉದ್ಯೋಗಾಕಾಂಕ್ಷಿ ಯುವಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ರಾಜ್ಯದಲ್ಲಿ 2.5ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಅದರಲ್ಲಿ ಶಿಕ್ಷಣ ಇಲಾಖೆಯಲ್ಲಿ 70 ಸಾವಿರ ಹುದ್ದೆಗಳು ಖಾಲಿ ಇದ್ದರೂ ಸಹ ಭರ್ತಿ ಮಾಡಲು ಮುಂದಾಗದ ಹಿನ್ನೆಲೆಯಲ್ಲಿ ಇತ್ತೀಚೆಗೆ ಧಾರವಾಡದಲ್ಲಿ ರಾಜ್ಯ ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿ ಯುವಕರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಎಚ್ಚೆತ್ತ ಸರ್ಕಾರ ಇದೀಗ ಆ ಲೋಪವನ್ನ ಸರಿಪಡಿಸಿಕೊಳ್ಳಲು ಮುಂದಾಗಿದೆ. ಮೈಸೂರಿನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳ ಯಶಸ್ವಿಯಾಗಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನ ಸೆಳೆಯುವ ನಿಟ್ಟಿನಲ್ಲಿ ಇದೀಗ ರಾಜ್ಯ ಎಲ್ಲಾ ಜಿಲ್ಲೆಗಳಲ್ಲೂ ಉದ್ಯೋಗ ಮೇಳ ಆಯೋಜನೆಗೆ ಮುಂದಾಗಿದೆ.
Key words: Job fairs, all districts, soon, CM Siddaramaiah