ನ.15 ರಿಂದ ಮೂರು ದಿನ ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ಸಾಧ್ಯತೆ

ಬೆಂಗಳೂರು,ಅಕ್ಟೋಬರ್,27,2025 (www.justkannada.in): ರಾಜ್ಯದಲ್ಲಿ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿದ್ದು ಈಗಾಗಲೇ ತೆರೆಮರೆಯಲ್ಲಿ ಚರ್ಚೆ ಶುರುವಾಗಿದೆ. ಈ ಮಧ್ಯೆ ಸಂಪುಟ ಪುನಾರಚನೆ ಮಾಡಿ ತಮ್ಮ ಕುರ್ಚಿ ಭದ್ರ ಮಾಡಿಕೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ  ನವೆಂಬರ್ 15ಕ್ಕೆ ದೆಹಲಿಗೆ ತೆರಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಹೈಕಮಾಂಡ್ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಸಂಪುಟ ಪುನಾರಚನೆ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ನವೆಂಬರ್ 15ರಿಂದ ಮೂರು ದಿನಗಳ ಕಾಲ ದೆಹಲಿಯಲ್ಲಿ ಠಿಕಾಣಿ ಹೂಡಲಿದ್ದಾರೆ ಎನ್ನಲಾಗುತ್ತಿದೆ.

ಇತ್ತ ಈ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್  ನಿನ್ನೆಯೇ ದೆಹಲಿ  ಭೇಟಿ ನೀಡಿದ್ದು ಇಂದು ಬೆಳಿಗ್ಗೆ 11 ಗಂಟೆಗೆ ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದರು. ಆದರೆ ಸಮಯ ಸಿಗದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುಳಿವು ಸಿಕ್ಕಿದ್ದು  ಹೈಕಮಾಂಡ್ ಭೇಟಿ ಮಾಡಿ ಚರ್ಚಿಸಲು ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.

Key words: CM, Siddaramaiah, Delhi, three days