ಬೆಂಗಳೂರು,ಅಕ್ಟೋಬರ್,28,2025 (www.justkannada.in): ಆರ್ ಎಸ್ ಎಸ್ ಪಥಸಂಚಲನಕ್ಕೆ ನಿರ್ಬಂಧ ವಿಧಿಸಿದ್ದ ರಾಜ್ಯಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಆರ್ ಎಸ್ ಎಸ್ ಪಥಸಂಚಲನಕ್ಕೆ ನಿರ್ಬಂಧ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆನೀಡಿದೆ. ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ತಡೆ ತೆರವಿಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದರು.
ಇನ್ನು ಹೈಕೋರ್ಟ್ ತಡೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಸರ್ಕಾರದ ಷಡ್ಯಂತ್ರಕ್ಕೆ ಹಿನ್ನಡೆಯಾಗಿದೆ ಎಂದು ತಿಳಿಸಿದ್ದಾರೆ.
Key words: CM Siddaramaiah, High court, stay, RSS







