ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ನವೆಂಬರ್,3,2025 (www.justkannada.in): ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಗೃಹ ಕಚೇರಿ ಕೃಷ್ಣದಲ್ಲಿ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು.

2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಭರವಸೆ ನೀಡಿದರು.

ಶಾಸಕರೂ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ  ಪೊನ್ನಣ್ಣ ಮತ್ತು ಸಚಿವರಾದ ಬೋಸರಾಜು, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸೇರಿ ಕೊಡವ ಸಮುದಾಯದ ಎಲ್ಲಾ ಮುಖಂಡರು ಉಪಸ್ಥಿತರಿದ್ದರು.

Key words: CM Siddaramaiah, announces, one crore, grant, Chennad hockey tournament