Friday, August 14, 2026

BDA Apartments

Home Front Page ಜನರನ್ನು ಕಚೇರಿಗಳಿಗೆ ಅಲೆದಾಡಿಸಬೇಡಿ- ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಜನರನ್ನು ಕಚೇರಿಗಳಿಗೆ ಅಲೆದಾಡಿಸಬೇಡಿ- ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮೈಸೂರು,ನವೆಂಬರ್,10,2025 (www.justkannada.in): ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲ ಎಂದು ಅಧಿಕಾರಿಗಳಿಗೆ  ಸಿಎಂ.ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಇಂದು  ಮೈಸೂರು ಜಿಲ್ಲಾ ಕೆಡಿಪಿ ಸಭೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಸಭೆ ಆರಂಭವಾಗುತ್ತಿದ್ದಂತೆಯೇ, ಸಭೆಗೆ ಗೈರು ಆಗಿರುವ ಅಧಿಕಾರಿ ಮತ್ತು ಸಿಬ್ಬಂದಿ ಯಾರಾದರೂ ಇದ್ದರೆ ಅವರ ವಿರುದ್ಧ ಕ್ರಮಕ್ಕೆ ಸೂಚಿಸಿದರು.

ಬಳಿಕ ಐತಿಹಾಸಿಕ ದಸರಾ ಹಬ್ಬವನ್ನು ಅತ್ಯಂತ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾಡಳಿತದ ಅಧಿಕಾರಿ ಮತ್ತು ಸಿಬ್ಬಂದಿ  ವರ್ಗಕ್ಕೆ ಅಭಿನಂದನೆ ಸಲ್ಲಿಸಿದರು.

ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗಧಿತ ಅವಧಿಯ ಒಳಗೆ ಕೆಲಸಗಳು ಪೂರ್ಣಗೊಳ್ಳಬೇಕು ಎನ್ನುವ ಸೂಚನೆಯನ್ನು ಹಿಂದಿನ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದೆ. ಆದರೂ ಈ ಬಗ್ಗೆ ಸಮಾಧಾನ ಆಗುವ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು.

ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು.  ಮೈಸೂರಿನ ಜನತೆ, ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ತುಂಬಾ ಮಂದಿ ಬರುತ್ತಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿವರೆಗೂ ನನಗೆ ಕಾಯುತ್ತಾ ಇರುತ್ತಾರೆ. ಇವರಲ್ಲಿ ವೈಯುಕ್ತಿಕ ಸಮಸ್ಯೆಗಾಗಿ ಬರುವವರು ಕಡಿಮೆ. ಹೆಚ್ಚಾಗಿ ಕಂದಾಯ ಇಲಾಖೆಗಳ ಸಮಸ್ಯೆಗಳಿಗಾಗಿ ಬರುವವರೇ ಹೆಚ್ಚು. ಮೈಸೂರಿನಲ್ಲೇ ಅವರ ಕೆಲಸಗಳು ಆಗಿದ್ದರೆ, ಮೈಸೂರಿನ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ಜನರ ಅಹವಾಲು ಕೇಳಿದ್ದರೆ, ಕೇಳಿ ಬಗೆಹರಿಸಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುತ್ತಿದ್ದಾರೆ.  “ಜನರನ್ನು ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲʼ ಎಂದು ಎಚ್ಚರಿಸಿದರು.

Key words: Mysore, KDP, Meeting, CM Siddaramaiah