ಚಾಮರಾಜನಗರ,ನವೆಂಬರ್,20,2025 (www.justkannada.in): ನವೆಂಬರ್ ಕ್ರಾಂತಿಯಾಗುತ್ತದೆ. ನಾಯಕತ್ವ ಬದಲಾವಣೆ ಆಗಲಿದೆ ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಯಾವ ಕ್ರಾಂತಿಯೂ ಇಲ್ಲ ಬ್ರಾಂತಿಯೂ ಇಲ್ಲ. ಜನಾಶೀರ್ವಾದ ಇರುವವರೆಗೂ ನಾನೇ ಸಿಎಂ ಎಂದು ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನವೆಂಬರ್ ಕ್ರಾಂತಿಯ ಬಗ್ಗೆ ಅನವಶ್ಯಕ ಚರ್ಚೆ ನಡೆಯುತ್ತಿದೆ. 5 ವರ್ಷ ಆದ ಮೇಲೆ ಚುನಾವಣೆ ನಡೆಯುತ್ತದೆ. ಆಗಲೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು.
ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಇಲ್ಲ. ಸಂಪುಟ ಪುನಾರಚನೆ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ ಹೈಕಮಾಂಡ್ ಬಳಿ ಈ ಕುರಿತು ಇನ್ನು ಚರ್ಚಿಸಬೇಕು ಆದರೆ ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಕುರಿತು ಪ್ರಸ್ತಾಪ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Key words: Chamarajanagar, No cabinet, reshuffle, CM, Siddaramaiah







