ಎಲ್ಲಾ ಗೊಂದಲಗಳಿಗೂ ಹೈಕಮಾಂಡ್ ಫುಲ್ ಸ್ಟಾಪ್ ಇಡಬೇಕು- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,25,2025 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಚರ್ಚೆಯಾಗುತ್ತಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಎಲ್ಲಾ ಗೊಂದಲಗಳೀಗೂ ಹೈಕಮಾಂಢ್ ಫುಲ್ ಸ್ಟಾಪ್ ಇಡಬೇಕು ಎಂದಿದ್ದಾರೆ.

ಕೆಲ ಶಾಸಕರು ದೆಹಲಿಗೆ ಭೇಟಿ ನೀಡಿರುವ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಸಿಎಂ ಸಿದ್ದರಾಮಯ್ಯ, ದೆಹಲಿಗೆ ಭೇಟಿ ನೀಡಲು ಶಾಸಕರು ಸ್ವತಂತ್ರರು. ಏನ್ ಹೇಳುತ್ತಾರೋ ಹೇಳಲಿ ಅಂತಿಮವಾಗಿ ಪಕ್ಷದ ಹೈಕಮಾಂಡ್  ತೀರ್ಮಾನ ತೆಗೆದುಕೊಳ್ಳುತ್ತದೆ.  ಹೈಕಮಾಂಡ್ ಏನು ಹೇಳುತ್ತಾರೋ ಅದಕ್ಕೆ ನಾವು ಬದ್ಧ. ಎಲ್ಲಾ ಗೊಂದಲಗಳಿಗೆ ಹೈಕಮಾಂಡ್ ಫುಲ್ ಸ್ಟಾಪ್ ಇಡಬೇಕು ಎಂದರು.

ಸಚಿವ ಸಂಪುಟ ಪುನಾರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ಹೇಳಿದ ನಂತರ ಸಚಿವ ಸಂಪುಟ ಪುನಾರಚನೆಯಾಗುತ್ತೆ . ರಾಹುಲ್ ಗಾಂಧಿ ಜೊತೆ ಚರ್ಚೆ ಮಾಡಿಲ್ಲ ಎಂದರು.

Key words: High command, full stop, all confusion, CM Siddaramaiah