ವಿಶ್ವಕಪ್ ಗೆದ್ದ ಕಬಡ್ಡಿ ತಂಡದ ರಾಜ್ಯದ ಆಟಗಾರ್ತಿಗೆ, ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಗೆದ್ದಆಟಗಾರನಿಗೆ ತಲಾ ಐದು ಲಕ್ಷ ಬಹುಮಾನ

ಬೆಂಗಳೂರು ನವೆಂಬರ್, 27,2025 (www.justkannada.in): ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ  ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ  ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಭಿನಂದಿಸಿ ಸನ್ಮಾನ ಮಾಡಿ ತಲಾ ಐದು ಲಕ್ಷ ರೂ ಪ್ರೋತ್ಸಾಹ ಧನ ಘೋಷಿಸಿದರು.‌

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋಂವಿಂದರಾಜು ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಇಬ್ಬರೂ ಪಟುಗಳಿಗೆ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು.

ಇಬ್ಬರೂ ಪಟುಗಳಿಗೆ ತಲಾ ಐದು ಲಕ್ಷದ ಚೆಕ್ ವಿತರಿಸುವಂತೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಮನೋಜ್ ಕುಮಾರ್, ಸಂಚಾಲಕ ರವೀಂದ್ರ,  ಕಾರ್ಯದರ್ಶಿ ರಾಜೇಶ್  ಮತ್ತು ತರಬೇತುದಾರ ಬಿ.ಎನ್.ಸುಧಾಕರ್ ಉಪಸ್ಥಿತರಿದ್ದು ಸಂಸ್ಥೆಗೆ ನಿವೇಶನ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Key words: players, prize, five lakhs, CM Siddaramaiah,