Saturday, October 24, 2026

Dasara Wishes

Minister S.T. Somashekar releases Yuva Dasara posters DasraWishes_JK DasraWishes JK
Happy Dasara
Home Front Page ನನ್ನ ಮತ್ತು ಡಿಕೆ ಶಿವಕುಮಾರ್ ನಡುವೆ ಯಾವುದೇ, ಗೊಂದಲ, ಭಿನ್ನಾಭಿಪ್ರಾಯವಿಲ್ಲ- ಸಿಎಂ ಸಿದ್ದರಾಮಯ್ಯ

ನನ್ನ ಮತ್ತು ಡಿಕೆ ಶಿವಕುಮಾರ್ ನಡುವೆ ಯಾವುದೇ, ಗೊಂದಲ, ಭಿನ್ನಾಭಿಪ್ರಾಯವಿಲ್ಲ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್.29,2025 (www.justkannada.in):  ನನ್ನ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಯಾವುದೇ ಗೊಂದಲ ಭಿನ್ನಾಭಿಪ್ರಾಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇಂದು  ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಹಿಂದೆಯೂ ಭಿನ್ನಾಭಿಪ್ರಾಯ ಇರಲಿಲ್ಲ ಮುಂದೆಯೂ ಇಲ್ಲ. ಅನಗತ್ಯವಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ.  2028ರ ವಿಧಾನಸಭಾ ಚುನಾವಣೆ ನಮಗೆ ಬಹಳ ಮುಖ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದರು.

2023ರ ಚುನಾವಣೆಯಲ್ಲಿ ನಾನು ಡಿಕೆ ಶಿವಕುಮಾರ್ ಹೇಗೆ ಒಟ್ಟಿಗೆ ಹೋಗಿದ್ದವೋ ಹಾಗೆಯೇ 2028ರ ಚುನಾವಣೆಯಲ್ಲಿ ಒಟ್ಟಿಗೆ ಹೋಗುತ್ತೇವೆ . ಸುಳ್ಳು ಅಪವಾದ ಆರೋಪ ಬಿಜೆಪಿ ಜೆಡಿಎಸ್ ನವರ ಚಾಳಿ. ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಕೇಳುತ್ತೇವೆ  ನಾವಿಬ್ಬರೂ ನಡೆದುಕೊಳ್ಳುತ್ತೇವೆ.  ಹೈಕಮಾಂಡ್ ಗೊಂದಲ ತಿಳಿ ಮಾಡುವ ಕೆಲಸ ಮಾಡಿತ್ತು.  ನಾಳೆಯಿಂದ ಯಾವುದೇ ಗೊಂದಲ ಇರಲ್ಲ. ಈಗಲೂ ಕೂಡ ಯಾವುದೇ ಗೊಂದಲ ಇಲ್ಲ.  ನಾನು ಸಂಪುಟ ಪುನಾರಚನೆ ಮಾಡುತ್ತೇನೆ ಎಂದು ಹೇಳಿದ್ದೆ ಹಾಗಾಗಿ ಕೆಲ ಶಾಸಕರು ಮಂತ್ರಿ ಮಾಡಿ ಎಂದು ದೆಹಲಿಗೆ ಹೋಗಿದ್ರು. ನಾಯಕತ್ವ ವಿರುದ್ದವಾಗಿ ಶಾಸಕರು ದೆಹಲಿಗೆ ಹೋಗಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words:  no confusion, DK Shivakumar, CM, Siddaramaiah