Friday, August 7, 2026

BDA Apartments

Home Front Page ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಮೈಸೂರು,ನವೆಂಬರ್,29,2025 (www.justkannada.in): ರಾಜ್ಯದಲ್ಲಿ ಎದ್ದಿದ್ದ ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಬ್ರೇಕ್ ಫಾಸ್ಟ್ ಮೀಟಿಂಗ್ ಮೂಲಕ ತೆರೆ ಎಳೆದಿದ್ದಾರೆ. ಈ ಬೆನ್ನಲ್ಲೆ ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಬೆಳಿಗ್ಗೆ 12 ಗಂಟೆಗೆ ಬೆಂಗಳೂರಿನಿಂದ ಹೊರಡಲಿರುವ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ12.25ಕ್ಕೆ ಮೈಸೂರಿಗೆ ಆಗಮಿಸಿ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ಇದಾದ ಬಳಿಕ ಹೆಚ್ ಡಿ ಕೋಟೆ ರಸ್ತೆ ಉದ್ದೂರು ಗೇಟ್ ಬಳಿ ಇರುವ ಅನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆಯುವ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.  ಇದಾದ ನಂತರ 9 ಗಂಟೆಗೆ ಬೆಂಗಳೂರಿಗೆ ವಾಪಸ್  ತೆರಳಲಿದ್ದಾರೆ.

Key words: CM, Siddaramaiah ,Mysore, tomorrow