ಬಳ್ಳಾರಿ ಗಲಾಟೆ: ಘಟನೆ ಬಗ್ಗೆ ತನಿಖೆ ಮಾಡಲು ಪೊಲೀಸರಿಗೆ ಸೂಚನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜನವರಿ,2,2026 (www.justkannada.in):  ಬಳ್ಳಾರಿಯಲ್ಲಿ ನಡೆದ ಗಲಾಟೆ ವೇಳೆ ಫೈರಿಂಗ್ ನಿಂದ ಕಾಂಗ್ರೆಸ್ ಕಾರ್ಯಕರ್ತ ಬಲಿ ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಗಲಾಟೆ ವೇಳೆ ಏರ್ ಫೈರಿಂಗ್ ಮಾಡಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಗುಂಡು ರಾಜಶೇಖರ್ ಗೆ ತಗುಲಿದೆ.  ಘಟನೆ ಬಗ್ಗೆ ತನಿಖೆ ಮಾಡಿ ಎಂದು ಪೊಲೀಸರಿಗೆ ಸೂಚಿಸಿದ್ದೇನೆ.  ಯಾರ ಗನ್ ನಿಂದ ಹಾರಿದ ಗುಂಡು ತಗುಲಿದೆ ಎಂದು ತನಿಖೆ ನಡೆಯಲಿದೆ. ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ ಎಂದರು.

ಈ ನಡುವೆ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಶಾಸಕ ನಾರಾ ಭರತ್ ರೆಡ್ಡಿ ವಿರುದ್ದ ಗರಂ ಆಗಿದ್ದಾರೆ ಎನ್ನಲಾಗಿದೆ.  ಭರತ್ ರೆಡ್ಡಿ ಜತೆ ಫೋನ್ ಮೂಲಕ ಮಾತನಾಡಿಸಲು ನಾಯಕರು ಮುಂದಾಗಿದ್ದರು. ಈ ವೇಳೆ ಗರಂ ಆದ ಸಿಎಂ ಸಿದ್ದರಾಮಯ್ಯ, ನಾನು ಅವನ ಜೊತೆ ಮಾತನಾಡುವುದಿಲ್ಲ ಎಂದು ಹೇಳಿ ಬಿ.ನಾಗೇಂದ್ರ ಅವರ ಜೊತೆ ಮಾತನಾಡಿದ್ದಾರೆ ಎನ್ನಲಾಗಿದೆ. ನಂತರ ಸ್ಥಳಕ್ಕೆ ತೆರಳುವಂತೆ ಕಂಪ್ಲಿ ಶಾಸಕ ಗಣೇಶ್ ಗೂ ಸೂಚಿಸಿದ್ದಾರೆ ಎನ್ನಲಾಗಿದೆ.

Key words: Bellary riots,  Police, investigate, CM Siddaramaiah