ಮೈಸೂರು,ಜನವರಿ,6,2026 (www.justkannada.in): ರಾಜ್ಯದ ದೀರ್ಘಾವಧಿವರೆ ರಾಜ್ಯದ ಮುಖ್ಯಮಂತ್ರಿ ಆಗುವ ಮೂಲಕ ತಾವು ಮಾಜಿ ಸಿಎಂ ದಿ.ಡಿ.ದೇವರಾಜ ಅರಸು ದಾಖಲೆ ಸರಿಗಟ್ಟಿದ ವಿಚಾರ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ. ಇಷ್ಟು ವರ್ಷದ ರಾಜಕಾರಣದಲ್ಲಿ ನನಗೆ ತೃಪ್ತಿ ಇದೆ. ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದೇನೆ. ನನ್ನ ಅಧಿಕಾರಾವಧಿಯಲ್ಲಿ ಹಲವು ಜನಪರ ಯೋಜನೆಗಳನ್ನ ಜಾರಿಗೆ ತಂದಿದ್ದೇನೆ ಎಂದರು.
ಇನ್ನು ನಾಯಕತ್ವ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಈ ಬಗ್ಗೆ ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಎಂದು ನುಡಿದರು.
Key words: Longest, tenure, CM, record, CM Siddaramaiah







