Saturday, September 5, 2026

BDA Apartments

Home Front Page ಜ.22 ರಿಂದ ಜಂಟಿ ಅಧಿವೇಶನ: ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ-ಸಿಎಂ ಸಿದ್ದರಾಮಯ್ಯ

ಜ.22 ರಿಂದ ಜಂಟಿ ಅಧಿವೇಶನ: ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜನವರಿ,20,2026 (www.justkannada.in): ಜನವರಿ 22 ರಿಂದ  ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು.

ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.

ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ,ಅಮಾನತ್ತುಗೊಳಿಸಲಾಗಿದೆ ಎಂದರು.

Key words: Joint session, Special discussion, NREGA scheme, CM, Siddaramaiah