Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ದಾವಣಗೆರೆ, ಫೆಬ್ರವರಿ,9,2026 (www.justkannada.in):  ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ  ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಇಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ವಾಲ್ಮೀಕಿ ಜನಾಂಗದವರಿಗೆ  ಸಚಿವ ಸ್ಥಾನ ಕೊಡಬೇಕೆಂದು ಬೇಡಿಕೆ ಇರುವ ಬಗ್ಗೆ ಪ್ರತಿಕ್ರಿಯೆ ನೀಡಿ,  ನಾವು  ಸಚಿವರನ್ನು  ತೆಗೆದುಹಾಕಿಲ್ಲ. ಕಾರಣಾಂತರದಿಂದ ರಾಜೀನಾಮೆ ಕೊಡುವ ಪರಿಸ್ಥಿತಿ ಬಂತು. ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಪರಿಗಣಿಸಲಾಗುವುದು ಎಂದರು.

ಸಚಿವ ಎಸ್.ಎಸ್.ಮಲ್ಲಿಕಾರ್ಜುನ ರಾಜೀನಾಮೆ: ಸತ್ಯಕ್ಕೆ ದೂರವಾದ ಸಂಗತಿ

ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಅವರು ರಾಜಿನಾಮೆ ಸಲ್ಲಿಸಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ ಎಂದರು.

ಬಜೆಟ್ ಮಂಡನೆ ದಿನಾಂಕ ; ಶೀಘ್ರ ಘೋಷಣೆ

ರಾಜ್ಯ ಬಜೆಟ್ ಗೆ ಸಂಬಂಧಿಸಿದಂತೆ ತಯಾರಿ  ನಡೆಯುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು  ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೆಟ್ರೋ ದರ ಹೆಚ್ಚಳ: ಸರ್ಕಾರದ ಪಾತ್ರವಿಲ್ಲ

ಮೆಟ್ರೋ ದರ  ಹೆಚ್ಚಳವಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಮೆಟ್ರೋ ದರವನ್ನು ಕೇಂದ್ರ ಸರ್ಕಾರದಿಂದ ನೇಮಕವಾಗಿರುವ ಮೆಟ್ರೋ ಅಧ್ಯಕ್ಷರು ನಿಗದಿ ಮಾಡುತ್ತಾರೆ. ಇದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದರು. ಮೆಟ್ರೋ ದರದ ಬಗ್ಗೆ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಅವರನ್ನೇ ಕೇಳಬೇಕು ಎಂದರು.

ಪ್ರಧಾನ ಮಂತ್ರಿಗಳು ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ

ಭಾರತ ಮತ್ತು ಅಮೆರಿಕ ನಡುವೆ ಆಗಿರುವ ಒಪ್ಪಂದದಿಂದ ರೈತರಿಗೆ ಅನ್ಯಾಯವಾಗುತ್ತದೆ. ಪ್ರಧಾನ ಮಂತ್ರಿಗಳು ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ ಎಂದರು.

Key words: Establishment,  tribal university,  CM, Siddaramaiah