Friday, October 9, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page ಕುಂಭಮೇಳದಲ್ಲಿ ಕಾಲ್ತುಳಿತ: ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ

ಕುಂಭಮೇಳದಲ್ಲಿ ಕಾಲ್ತುಳಿತ: ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ

ಬೆಂಗಳೂರು,ಜನವರಿ,29,2025 (www.justkannada.in): ಪ್ರಯಾಗ್‌ ರಾಜ್‌ನ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಯಾಗ್‌ ರಾಜ್‌ ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ

ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ. ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.

Key words: KumbhMela, died, condolences, CM Siddaramaiah