Friday, September 18, 2026

BDA Apartments

ನಾಳೆಯಿಂದ ಎರಡು ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ BDA JK_Adv BDA Adv
Home Front Page ನಾಳೆಯಿಂದ ಎರಡು ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ನಾಳೆಯಿಂದ ಎರಡು ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಜನವರಿ,30,2025 (www.justkannada.in): ಸಿಎಂ ಸಿದ್ದರಾಮಯ್ಯ ಅವರು ಜನವರಿ 31 ಮತ್ತು ಫೆಬ್ರವರಿ 1 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.

ಜನವರಿ 31 ರಂದು ಬೆಳಗ್ಗೆ 10.50 ಗಂಟೆಗೆ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿರುವ ಸಾಂಸ್ಕೃತಿಕ ಮೇಳ ಮತ್ತು ವಸ್ತುಪ್ರದರ್ಶನ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಶ್ರೀ ಸುತ್ತೂರು ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ, ವಾಲ್ಮೀಕಿ ಸಮುದಾಯ ಭವನ ಕಟ್ಟಡದ ಅಡಿಗಲ್ಲು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಡಿಕೇರಿಗೆ ತೆರಳುವರು.

ಫೆಬ್ರವರಿ 01 ರಂದು ಬೆಳಗ್ಗೆ 11 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಗುತ್ತಿಗೆ ನೌಕರರ ಸಂಘ, ಬೆಂಗಳೂರು ವತಿಯಿಂದ ಆಯೋಜಿಸಿರುವ ರಾಜ್ಯ ಮಟ್ಟದ ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶ -2025 ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 2.30 ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆದಿ ಕರ್ನಾಟಕ /ಛಲವಾದಿ ಮಹಾಸಂಸ್ಥಾನ ಗುರುಪೀಠ ವತಿಯಿಂದ ಹಮ್ಮಿಕೊಂಡಿರುವ ಡಾ. ಬಿ. ಆರ್. ಅಂಬೇಡ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾತ್ರಿ 7 ಗಂಟೆಗೆ ಕಾಲಬೈರವೇಶ್ವರ ಕನ್ವೆನ್ಷನ್ ಹಾಲ್ ಆದಿ ಚುಂಚನಗಿರಿ ರಸ್ತೆ, ಹಾಗೂ 7.30 ಗಂಟೆಗೆ ನಿತ್ಯಾನಂದ ಕಲ್ಯಾಣ ಮಂಟಪ ಸ್ಟರ್ಲಿಂಗ್ ಟಾಕೀಸ್ ಹತ್ತಿರ ಇಲ್ಲಿ ಖಾಸಗಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ತಿಳಿಸಿದ್ದಾರೆ.

Key words: CM Siddaramaiah, Mysuru district, tour, tomorrow