Monday, August 3, 2026

BDA Apartments

Home Front Page ಮಹಾತ್ಮಾ ಗಾಂಧಿ ಅವರ ಮೌಲ್ಯಗಳನ್ನ ಕೊಲ್ಲಲು ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

ಮಹಾತ್ಮಾ ಗಾಂಧಿ ಅವರ ಮೌಲ್ಯಗಳನ್ನ ಕೊಲ್ಲಲು ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜನವರಿ,30,2025 (www.justkannada.in):  ಮಹಾತ್ಮ ಗಾಂಧೀಜಿ ಅವರನ್ನು ಗುಂಡಿಟ್ಟು ಕೊಂದಿರಬಹುದು. ಆದರೆ, ಅವರ ಮೌಲ್ಯಗಳನ್ನು ಕೊಲ್ಲಲು ಸಾಧ್ಯವಿಲ್ಲ. ಇವತ್ತಿಗೂ ಗಾಂಧಿ ವಿಚಾರಗಳು ಭಾರತ ಜಗತ್ತಿನಲ್ಲಿ ಪ್ರಸ್ತುತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಗಾಂಧಿ ಹುತಾತ್ಮ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ನಿಜವಾಗಿ  ಗಾಂಧೀಜಿ ಅವರಿಗೆ ಗೌರವ ಸಲ್ಲಿಸುವುದು ಅಂದರೆ ಯಾವ ಮೌಲ್ಯಗಳಿಗಾಗಿ ಅವರು ಹೋರಾಟ ಮಾಡಿದ್ದಾರೋ, ಆ ಮೌಲ್ಯಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡಾಗ. ಸತ್ಯ ಅಹಿಂಸೆ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ತಂದು ಕೊಟ್ಟರು. ನಾವು ಗಾಂಧೀಜಿ ಅವರಿಗೆ ನಿಜವಾಗಿ ಗೌರವ ಸಲ್ಲಿಸುವುದು ಅವರ ತತ್ವಾದರ್ಶಗಳನ್ನು ಪಾಲಿಸಿದಾಗ ಮಾತ್ರ. ದೇಶ, ಸಮಾಜ ಕಟ್ಟುವ ಕೆಲಸ ಮಾಡಿದಾಗ ಮಾತ್ರ ಗಾಂಧೀಜಿಗೆ ಗೌರವ ನೀಡಿದಂತೆ ಎಂದರು.

ಇದೇ ವೇಳೆ ಬಿಜೆಪಿ ವಿರುದ್ದ ಗುಡುಗಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ದೇಶವನ್ನು ಹಿಂದೂಸ್ತಾನವನ್ನು ಹಿಂದೂರಾಷ್ಟ್ರ ಮಾಡುತ್ತೇವೆ ಎಂದು ಹೊರಟಿದ್ದಾರೆ. ಏಕ ಭಾಷೆ ಏಕ ಸಂಹಿತೆ ಜಾರಿಗೆ ತರಲು ಹೊರಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಸಬೇಕು ಪ್ರಜಾಪ್ರಭುತ್ವ ರಕ್ಷಣೆಯಾಗಬೇಕು. ನಾವೆಲ್ಲರೂ ಕೂಡ ಎರಡನೇ ಹೋರಾಟವನ್ನು ಮಾಡಬೇಕು. ಕಾಂಗ್ರೆಸ್ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Mahatma Gandhi, values,  CM,  Siddaramaiah