ಬೈಎಲೆಕ್ಷನ್: ಎರಡೂ ಕ್ಷೇತ್ರಗಳಲ್ಲಿ ನಾವೇ ಗೆಲ್ತೇವೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,4,2026 (www.justkannada.in): ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೆಕ್ ಟು ನೆಕ್  ಫೈಟ್ ಇದ್ದರೆ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಸಾಧಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ,  ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ದಾವಣಗೆರೆಯಲ್ಲಿ ಲೀಡ್ ಕಡಿಮೆಯಾಗಬಹುದು. ಆದರೆ ನಾವೇ ಗೆಲ್ಲುತ್ತೇವೆ . ಬಾಗಲಕೋಟೆಯಲ್ಲೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.

ಇನ್ನು ತಮಿಳುನಾಡಿನ ವಿಧಾನಸಭಾ ಚುನಾವಣಾ ಫಲಿತಾಂಶ ಸಂಬಂಧ ಭರ್ಜರಿ ಮುನ್ನಡೆ ಸಾಧಿಸಿರುವ  ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

Key words: By-election, win, both constituencies, CM Siddaramaiah