ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಿಂಪಡೆಯಿರಿ- ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಮೇ,15,2026 (www.justkannada.in): ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು  ಒತ್ತಾಯಿಸುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ನಿರ್ಧಾರ ಖಂಡಿಸಿದ ಸಿಎಂ ಸಿದ್ದರಾಮಯ್ಯ, ಮೋದಿ ಸರ್ಕಾರ ಚುನಾವಣೆ ಬಳಿಕ ದರ ಏರಿಕೆ ಮಾಡುತ್ತಾರೆ ಎಂದು ಗೊತ್ತಿತ್ತು. ಮೋದಿ ಸರ್ಕಾರವು ಹಲವು ಬಾರಿ ಬೆಲೆ ಏರಿಕೆ ಮಾಡಿದ್ದಾರೆ.  ಜನರು ಹಣದುಬ್ಬರದಿಂದ ತತ್ತರಿಸಿದ್ದಾರೆ. ಇದೀಗ ಪೆಟ್ರೋಲ್‌, ಡೀಸೆಲ್ ಬೆಲೆ‌ ಏರಿಕೆಯು ಜನಸಾಮಾನ್ಯರ ಬದುಕನ್ನು ಅಸ್ತವ್ಯಸ್ತಗೊಳಿಸುತ್ತದೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್ ಡೀಸೆಲ್ ದರ ಹೆಚ್ಚಿಸಿದ್ದಾರೆ. ಇದು ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಹೀಗಾಗಿ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆಯನ್ನ 3 ರೂ. ಹೆಚ್ಚಳ ಮಾಡಿದೆ.

 

Key words: Revoke, petrol and diese, pric,e hike ,CM Siddaramaiah