Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ದೇಶದಲ್ಲಿ ಬೆಲೆ ಏರಿಕೆಗೆ ಪ್ರಧಾನಿ ಮೋದಿ ಕಾರಣ- ಸಿಎಂ ಸಿದ್ದರಾಮಯ್ಯ ವಾಗ್ದಾಳಿ    

ದೇಶದಲ್ಲಿ ಬೆಲೆ ಏರಿಕೆಗೆ ಪ್ರಧಾನಿ ಮೋದಿ ಕಾರಣ- ಸಿಎಂ ಸಿದ್ದರಾಮಯ್ಯ ವಾಗ್ದಾಳಿ    

ತುಮಕೂರು,ಮೇ,19,2026 (www.justkannada.in):  ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ದೇಶದಲ್ಲಿ ಬೆಲೆ ಏರಿಕೆಗೆ ಪ್ರಧಾನಿ ಮೋದಿ ಕಾರಣ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ತುಮಕೂರಿನಲ್ಲಿ ಆಯೋಜಿಸಿದ್ದ ಸರ್ಕಾರದ 3ನೇ ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇವತ್ತು ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ. ಮನ್ ಮೋಹನ್  ಸಿಂಗ್ ಸರ್ಕಾರದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟಿತ್ತು.  ಈಗ ಬೆಲೆ ಎಷ್ಟಿದೆ ಇವತ್ತು ದೇಶದಲ್ಲಿ ಬೆಲೆ ಏರಿಕೆಗೆ ಮೋದಿ ಕಾರಣ ಎಂದು ಗುಡುಗಿದರು.

ಅಚ್ಚೇದಿನ್ ಅಂತಾ ಮೋದಿ ಪದೇ ಪದೇ ಹೇಳುತ್ತಾರೆ. ಇದನ್ನು ನಾವು ಅಚ್ಚೇದಿನ್  ಎಂದು ಕರೆಯಬೇಕಾ?  ಮೋದಿ ಸರ್ಕಾರದಲ್ಲಿಅದಾನಿ ಅಬಾನಿಗೆ ಮಾತ್ರ ಲಾಭ  ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.ದೇಶದಲ್ಲಿ ಬೆಲೆ ಏರಿಕೆಗೆ ಪ್ರಧಾನಿ ಮೋದಿ ಕಾರಣ- ಸಿಎಂ ಸಿದ್ದರಾಮಯ್ಯ ವಾಗ್ದಾಳ...

Key words: PM Modi, responsible, price hike, CM Siddaramaiah