Thursday, October 15, 2026

Dasara Wishes

Happy Dasara
Home Front Page ನುಡಿದಂತೆ ನಡೆದ ಹೆಮ್ಮೆ ನಮಗಿದೆ: 3 ವರ್ಷದ ಸಾಧನೆ ಮೆಲುಕು ಹಾಕಿದ ಸಿಎಂ ಸಿದ್ದರಾಮಯ್ಯ

ನುಡಿದಂತೆ ನಡೆದ ಹೆಮ್ಮೆ ನಮಗಿದೆ: 3 ವರ್ಷದ ಸಾಧನೆ ಮೆಲುಕು ಹಾಕಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,27,2026 (www.justkannada.in): ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ಸಿದ್ದರಾಮಯ್ಯ  ರಾಜೀನಾಮೆ ನೀಡುವ ಸಾಧ್ಯತೆ ಇದಕ್ಕೂ ಈ ಮುನ್ನ ತಮ್ಮ ಮೂರು ವರ್ಷದ ಸಾಧನೆ ಕುರಿತು ಮೆಲುಕು ಹಾಕಿದ್ದಾರೆ.

ಈ  ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ‌ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.

ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದ್ದಾರೆ.

ವಿದ್ಯುತ್ ಬಿಲ್ ಹೊರೆಯಿಂದ ಕಂಗೆಟ್ಟಿದ್ದ ಜನರಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಿ, ನೆಮ್ಮದಿಯ ಬದುಕು ಕಲ್ಪಿಸುವ ಬದ್ಧತೆಯೊಂದಿಗೆ ನಾವು ಜಾರಿಗೆ ತಂದ ಗೃಹಜ್ಯೋತಿ ಯೋಜನೆ ಇಂದು ನಾಡಿನ ಪ್ರತಿ ಮನೆಯನ್ನು ಬೆಳಗುತ್ತಿದೆ.

ಈ ಯೋಜನೆಯಡಿ  ರಾಜ್ಯದ ಒಟ್ಟು 1.64 ಕೋಟಿ ಕುಟುಂಬಗಳಿಗೆ ಮಾಸಿಕ ಗರಿಷ್ಠ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈವರೆಗೆ ಯೋಜನೆಗಾಗಿ ₹26,115 ಕೋಟಿ ಅನುದಾನವನ್ನು ವ್ಯಯಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.ನುಡಿದಂತೆ ನಡೆದ ಹೆಮ್ಮೆ ನಮಗಿದೆ: 3 ವರ್ಷದ ಸಾಧನೆ ಮೆಲುಕು ಹಾಕಿದ ಸಿಎಂ ಸಿದ್ದರ...

Key words: CM Siddaramaiah, 3 years,  achievements