ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ,ಕುಡಿಯುವ ನೀರು- ಸಿಎಂ ಸಿದ್ದರಾಮಯ್ಯ ಘೋಷಣೆ.

ಬೆಂಗಳೂರು,ನವೆಂಬರ್,1,2023(www.justkannada.in):  ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರು ಪೂರೈಸುವುದಾಗಿ  ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

68ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀಡುವುದಾಗಿ ಭರವಸೆ ನೀಡಿದರು.

ಇಂದಿನಿಂದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರು ಪೂರೈಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಪೋಷಕರು ಹೆಚ್ಚಾಗಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುತ್ತಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಕಲಿತರೇ ಮೇದಾವಿಗಳಾಗಲ್ಲ, ಸಾಧನೆ ಮಾಡಲು ಸಾಧ್ಯವಿಲ್ಲ ಎಂಬುವ ತಪ್ಪು ಕಲ್ಪನೆ ಪೋಷಕರಲ್ಲಿ ಮೂಡಿದೆ. ನಮ್ಮ ಪ್ರಯತ್ನಗಳಿಗೆ ನ್ಯಾಯಾಲಯ ಸಹ ಸಹಕಾರ ನೀಡುತ್ತಿಲ್ಲ. ನ್ಯಾಯಾಲಯ ಕೂಡಾ ಪೋಷಕರು ಇಚ್ಛಿಸುವ ಮಾಧ್ಯಮದಲ್ಲಿಯೇ ಮಕ್ಕಳು ಓದಬೇಕು ಅಂತ ಹೇಳಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.

ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯಿನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.

ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದರು.

ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು.

ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಉದಾಹರಿಸಿದರು.

Key words: CM Siddaramaiah –announced- free electricity -drinking water – government schools

ENGLISH SUMMARY…

Hesaraayitu Karnataka-Usiragali Kannada; celebration throughout the year

50th anniversary of renaming Karnataka should have been celebrated by the previous BJP government. They did not celebrate. Hence we are celebrating the event

All government schools to be provided with free water and electricity from today: Chief Minister Siddaramaiah announces

Bengaluru, November 1: Chief Minister Siddaramaiah announced that all government schools will be provided with free water and electricity from today.

He was speaking after hoisting flag at the 68th Kannada Rajyotsava programme organized by the Department of School Education and Literacy at Kantheerava Stadium, here today.

He said that our government is constantly striving to make Kannadigas economically and socially powerful, increase the quality of education and increase the basic facilities of Kannada schools.

It has been 50 years since Devaraja Urs named the state of Mysore as Karnataka. Let’s make a pledge today. Let us work to pay off the debt of our motherland by taking a pledge to speak in Kannada. The CM called upon everyone living in the State to create a Kannada atmosphere and celebrate it.

There are people who don’t speak Kannada though they have lived here. Our official language is Kannada. So we have to speak in Kannada itself. We should respect everyone and every language. But while interacting in our State, Kannada should be used in administration. He said that every officer should follow this without fail.

We cannot agree to Central Government conducting competitive examinations in Karnataka only in English and Hindi. Earlier I had insisted on conducting the entrance exam in Kannada as well. The CM said that if necessary, he will write to the centre again and demand it.

The love for English Convents has grown due to the misconception that if you study in Kannada, you will not get a job, you will not be able to acquire knowledge. This is not correct. People educated in Kannada medium have occupied high positions in all sectors of society. The CM gave examples of people who studied in Kannada medium and have made their mark in the society.

He said that it is the priority of our government to provide quality education and good learning environment and to increase the quality of schools and provide all necessary facilities.

The Supreme Court said that it is left to the decision of the parents to educate their children in the language of their choice. But, he said, it should be understood that learning in the medium of mother tongue is the most scientific.

Deputy Chief Minister D.K Shivakumar, Primary Education Minister Madhu Bangarappa, MLA Rizwan Arshad, Chief Minister’s Political Secretary Govindaraju and many dignitaries were present.