Friday, August 21, 2026

BDA Apartments

Home Front Page ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು,ಅಕ್ಟೋಬರ್,22,2024 (www.justkannada.in):  ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಕಣ ರಂಗೇರಿದ್ದು ಈ ನಡುವೆ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ.ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಂ ಅವರಿಗೆ ಟಿಕೆಟ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಅಲ್ಲದೆ ಇಂದು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಾಗುತ್ತದೆ.  ನಮ್ಮ ಅಧ್ಯಕ್ಷರು  ಅಲ್ಲೇ ಇದ್ದಾರೆ. ಅವರೇ ತೀರ್ಮಾನ ಮಾಡುತ್ತಾರೆ. ಮಾಜಿ ಸಂಸದ ಡಿಕೆ ಸುರೇಶ್ ಹೆಸರು ಚರ್ಚೆಯಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Key words: CM Siddaramaiah, announced, Sandur, Congress candidate