Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಬೆಂ-ಮೈ ಹೆದ್ದಾರಿ ಲೋಪದೋಷ ಸರಿಪಡಿಸಿ- ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಮನವಿ.

ಬೆಂ-ಮೈ ಹೆದ್ದಾರಿ ಲೋಪದೋಷ ಸರಿಪಡಿಸಿ- ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಮನವಿ.

ನವದೆಹಲಿ,ಆಗಸ್ಟ್,3,2023(www.justkannada.in):  ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿನ ಲೋಪದೋಷ ಸರಿಪಡಿಸುವಂತೆ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಸಿಎಂ ಸಿದ‍್ಧರಾಮಯ್ಯ ಮನವಿ ಮಾಡಿದರು.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು.‌ ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ನಿತಿನ್ ಗಡ್ಕರಿ ಅವರು ಭರವಸೆ ನೀಡಿದರು.

ಶಿರಾಡಿ ಘಾಟ್ ಸುರಂಗ ಮಾರ್ಗ ಕುರಿತಾಗಿಯೂ  ಸಿಎಂ ಸಿದ್ಧರಾಮಯ್ಯ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಜರಿದ್ದರು.

Key words: CM Siddaramaiah- appeals – Union –Transport- Minister- Nitin Gadkari.