ಮೈಸೂರು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಗೆ ಚಾಲನೆ- ಸುತ್ತೂರು ಹೆಲಿಪ್ಯಾಡ್ ನಲ್ಲಿ ಸಿಎಂ ಸಿದ್ಧರಾಮಯ್ಯ ಹೇಳಿಕೆ.

ಮೈಸೂರು,ಜೂನ್,10,2023(www.justkannada.in): ಮೈಸೂರು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಗೆ, ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಸಿಎಂ ಆದ ಸಿಎಂ ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಸಿಎಂ ಸಿದ‍್ಧರಾಮಯ್ಯ ಭೇಟಿ ನೀಡುತ್ತಿದ್ದು ಇಂದು ಸುತ್ತೂರು ಹೆಲಿಪ್ಯಾಡ್ ಗೆ ಬಂದಿಳಿದರು. ಸಿಎಂ ಸಿದ‍್ಧರಾಮಯ್ಯಗೆ ಭರ್ಜರಿ ಸ್ವಾಗತ ಕೋರಲಾಯಿತು.  ನಂಜನಗೂಡು ತಾಲ್ಲೂಕು ಬಿಳಿಗೆರೆ ಗ್ರಾಮದಲ್ಲಿ ನಡೆಯುವ  ಕೃತಜ್ಞತಾ ಸಮಾವೇಶದಲ್ಲಿ  ಸಿದ್ಧರಾಮಯ್ಯ ಭಾಗಿಯಾಗಲಿದ್ದಾರೆ.

ಸುತ್ತೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ,  ನಾಳೆ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದೇವೆ. ಎಲ್ಲರೂ ಉಚಿತ ಯೋಜನೆ ಪಡೆಯಬೇಕೆಂದು ಕಡ್ಡಾಯವಲ್ಲ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕೆಲಸ ಮಾಡಲಿಲ್ಲ ಎಂದರು.

ವರುಣಾವನ್ನು ತಾಲ್ಲೂಕು ಕೇಂದ್ರ ಮಾಡಬೇಕೆಂಬ ಆಗ್ರಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ಧರಾಮಯ್ಯ,  ವರುಣಾ ಜನ ಕೇಳಿದ್ರೆ ಮಾಡುತ್ತೇವೆ. ಬಸವರಾಜ ಬೊಮ್ಮಾಯಿ ಹೇಳಿದ್ರೆ ಮಾಡುವುದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಪಿಎಸ್ ಐ ನೇಮಕಾತಿ ಹಗರಣದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಎಡಿಜಿಪಿ ಅಮೃತ್ ಪೌಲ್ ಎನ್ನುವವರು ಜೈಲಿನಲ್ಲಿದ್ದಾರೆ. ಎಂದರು.

ನಮ್ಮದು ನುಡಿದಂತೆ ನಡೆಯುವ ಸರ್ಕಾರ.  ನಾವು ಏನು ಹೇಳುತ್ತೇವೋ ಅದನ್ನ ಜಾರಿ ಮಾಡುತ್ತೇವೆ. ಬಿಜೆಪಿಯವರ ರೀತಿ ಸುಳ್ಳು ಹೇಳಿ ದ್ರೋಹ ಮಾಡುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.

ಕೇಂದ್ರದಿಂದ ಬರಬೇಕಿರುವ ಜಿಎಸ್ ಟಿ ಬಾಕಿ ಹಣ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ಧರಾಮಯ್ಯ, ಕೇಂದ್ರದಿಂದ  ರಾಜ್ಯಕ್ಕೆ ಏನೆಲ್ಲಾ ಬರಬೇಕೋ ಎಲ್ಲವನ್ನೂ ಪಡೆಯಲು ಒತ್ತಾಯ ಪೂರ್ವಕವಾಗಿ ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.

Key words: CM Siddaramaiah-arrived- Mysore -suttur