ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ, ಮಿಲೆಟ್ ಹಬ್ ನಿರ್ಮಾಣ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,6,2026 (www.justkannada.in): ರೈತ ಆದಾಯ ಮೂಲ ಹೆಚ್ಚಿಸಲು ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಇಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, 100 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುತ್ತದೆ. ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.

ಅಡಿಗೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ. ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ ಎಐ ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಆರಂಭಿಸಲಾಗುವುದು ಎಂದು ಸಿದ್ದರಾಮಯ್ಯ  ಬಜೆಟ್ ನಲ್ಲಿ ತಿಳಿಸಿದ್ದಾರೆ.

Key words: CM Siddaramaiah Budget, Agriculture