ಮದ್ಯ ಪ್ರಿಯರಿಗೆ ಶಾಕ್: ಅಬಕಾರಿ ತೆರಿಗೆ ಶೇ.20ರಷ್ಟು ಹೆಚ್ಚಳ.

ಬೆಂಗಳೂರು,ಜುಲೈ,7,2023(www.justkannada.in):  ಮದ್ಯಪ್ರಿಯರಿಗೆ ಸರ್ಕಾರ ಶಾಕ್ ನೀಡಿದ್ದು, ಅಬಕಾರಿ ತೆರಿಗೆ ಶೇ.20ರಷ್ಟು ಹೆಚ್ಚಳ ಮಾಡುವುದಾಗಿ ಬಜೆಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

ಇಂದು ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ಧರಾಮಯ್ಯ ಮಂಡಿಸುತ್ತಿದ್ದು,  ಅಬಕಾರಿ ತೆರಿಗೆ ಶೇ.20ರಷ್ಟು ಹೆಚ್ಚಳ. ಬಿಯರ್‌ ಮೇಲಿನ ಅಬಕಾರಿ ಸುಂಕ ಶೇ.10ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ನಮ್ಮ ಸರ್ಕಾರ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಲಿದೆ. ಸಮಾಜದ ದುರ್ಬಲ ವರ್ಗದ ಕಲ್ಯಾಣ, ಪರಿಸರ ಸಂರಕ್ಷಣೆ ನಮ್ಮ ಸರ್ಕಾರದ ಆಶಯವಾಗಿದೆ. ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿ ಮಾಡೋದು ನಮ್ಮ ಗುರಿ. ಸರ್ವಜನಾಂಗದ ಶಾಂತಿಯ ತೋಟ ನಮ್ಮ ಧ್ಯೇಯವಾಗಿದೆ. ಜನರನ್ನು ದಿಕ್ಕು ತಪ್ಪಿಸುವ ಕೆಲಸ ವಿಪಕ್ಷಗಳು ಮಾಡಬಾರದು. ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬಾರದು ಎಂದು ತಿಳಿಸಿದ್ದಾರೆ.

Key words: CM Siddaramaiah-budget- Excise –tax- increased – 20%.