Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ- ಡಿಸಿಎಂ ಡಿಕೆ ಶಿವಕುಮಾರ್

ನಗರಗಳ ಬೆಳವಣಿಗೆಯೇ ಗ್ರಾಮೀಣಾಭಿವೃದ್ಧಿಗೆ ಶಕ್ತಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಸೆಪ್ಟೆಂಬರ್‌,26,2024 (www.justkannada.in): ಪಕ್ಷದ ಹಿತ ದೃಷ್ಟಿಯಿಂದ ಸಿಎಂ  ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ಕೋಳಿವಾಡ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್‌, ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ ಎಂದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಪರ ಕಾಂಗ್ರೆಸ್ ಇದೆ. ಮುಖ್ಯಮಂತ್ರಿಗಳು ರಾಜೀನಾಮೆ ಕೊಡುವ ಪ್ರಸ್ತಾವನೆ ಬರಲ್ಲ.  ಇದು ಬಿಜೆಪಿ ಜೆಡಿಎಸ್ ಮಾಡುತ್ತಿರುವ ಷಡ್ಯಂತ್ರ ಎಂದು ಟೀಕಿಸಿದರು.

ಹಳ್ಳಿಯಿಂದ ದೆಹಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ.  ಸಿಎಂ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನವರು ರಾಜಕೀಯವಾಗಿ ಷಡ್ಯಂತ್ರ ರೂಪಿಸುತ್ತಿದ್ದಾರೆ.  ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿರುವುದನ್ನು ವಿರೋಧ ಪಕ್ಷಗಳಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ  ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ. ಇಲ್ಲಿ ನಮ್ಮ ಸರ್ಕಾರ ಇರುವುದನ್ನು ಸಹಿಸಲು ಅವರಿಂದ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ ಎಂದರು.

Key words: CM Siddaramaiah, cannot, resign,  DCM, DK Shivakumar