ನಾನು ವರ್ಗಾವಣೆ ದಂಧೆ ಮಾಡಿದ್ರೆ ರಾಜಕೀಯದಿಂದಲೇ ನಿವೃತ್ತಿ- ವೈರಲ್ ವಿಡಿಯೋ ಕುರಿತು ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ.

ಬೆಂಗಳೂರು, ನವೆಂಬರ್,16,2023(www.justkannada.in):   ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ಅವರ ವಿಡಿಯೋ ವೈರಲ್ ಆಗಿರುವ  ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ಧರಾಮಯ್ಯ,  ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದು ಸಾಬೀತುಪಡಿಸಿದರೇ ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ಸಿಎಸ್​ಆರ್ ಫಂಡ್​ ವಿಚಾರವಾಗಿ ಯತೀಂದ್ರ ಮಾತಾಡಿದ್ದಾರೆ. ಆದರೆ  ರಾಜಕೀಯ ಕಾರಣಕ್ಕಾಗಿ ವಿಪಕ್ಷಗಳು ಆರೋಪ ಮಾಡುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

Key words: CM Siddaramaiah -clarifies –about- viral video