ಬೆಂಗಳೂರು,ಜನವರಿ,22,2026 (www.justkannada.in): ಇಂದಿನಿಂದ ರಾಜ್ಯ ವಿಧಾನ ಮಂಡಲ ವಿಶೇಷ ಅಧೀವೇಶನ ಆರಂಭವಾಗಿದ್ದು ಈ ಮಧ್ಯೆ ಭಾರೀ ಹೈಡ್ರಾಮಾವೇ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಒಂದೇ ಸಾಲಿನಲ್ಲಿ ಭಾಷಣ ಓದಿ ಮುಗಿಸಿ ತೆರಳಿದ ಹಿನ್ನೆಲೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಜನವರಿ 28ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಜನವರಿ 28 ರಂದು ಸಂಜೆ 6.30ಕ್ಕೆ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ರಾಜ್ಯಪಾಲರ ಭಾಷಣ, ವಿಪಕ್ಷಗಳ ಟೀಕೆಗೆ ಉತ್ತರ ಕೊಡುವ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ.
ವಿಧಾನ ಮಂಡಲ ವಿಶೇಷ ಅಧಿವೇಶನ ಜನವರಿ 31ರವರೆಗೆ ನಡೆಯಲಿದ್ದು, ಮನರೇಗಾ ಯೋಜನೆ ಹೆಸರು ಬದಲಿಸಿದ ಕೇಂದ್ರ ಸರ್ಕಾರದ ನಡೆಗೆ ಆಕ್ಷೇಪಿಸಿ ಚರ್ಚಿಸಲು ಈ ಅಧಿವೇಶನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
Key words: CM Siddaramaiah, calls, CLP meeting, January 28







