ಅಪಘಾತ ದುರಂತದಲ್ಲಿ 9 ಮಂದಿ ಸಾವು: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಡಿಸೆಂಬರ್,25,2025 (www.justkannada.in):  ಚಿತ್ರದುರ್ಗದ ಜಿಲ್ಲೆ ಹಿರಿಯೂರು  ತಾಲ್ಲೂಕು ಜವನಗೊಂಡಹಳ್ಳಿ ಬಳಿ ಸಂಭವಿಸಿದ ಕಂಟೇನರ್- ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ  ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು.  ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.

ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

Key words: 9 people, died, accident, CM Siddaramaiah, Condolences