Wednesday, November 11, 2026

Dasara Wishes

Just Kannada DasraWishes_JK DasraWishes JK
Happy Dasara
Home Crime ಅಪಘಾತ ದುರಂತದಲ್ಲಿ 9 ಮಂದಿ ಸಾವು: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಅಪಘಾತ ದುರಂತದಲ್ಲಿ 9 ಮಂದಿ ಸಾವು: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಡಿಸೆಂಬರ್,25,2025 (www.justkannada.in):  ಚಿತ್ರದುರ್ಗದ ಜಿಲ್ಲೆ ಹಿರಿಯೂರು  ತಾಲ್ಲೂಕು ಜವನಗೊಂಡಹಳ್ಳಿ ಬಳಿ ಸಂಭವಿಸಿದ ಕಂಟೇನರ್- ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ  ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು.  ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.ಅಪಘಾತ ದುರಂತದಲ್ಲಿ 9 ಮಂದಿ ಸಾವು: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ bus

ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

Key words: 9 people, died, accident, CM Siddaramaiah, Condolences