ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿ 36 ಕಾಂಗ್ರೆಸ್ ಮುಖಂಡರಿಗೆ ಕೋರ್ಟ್ ನಿಂದ ಸಮನ್ಸ್.

ಬೆಂಗಳೂರು,ಜೂನ್,13,2023(www.justkannada.in): ವಿಚಾರಣೆಗೆ ಖುದ್ದು ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿ 36 ಕಾಂಗ್ರೆಸ್ ಮುಖಂಡರಿಗೆ  ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಸಮನ್ಸ್ ಜಾರಿ ಮಾಡಿದೆ.

ಜುಲೈ 28ರಂದು ಖುದ್ದು ಹಾಜರಾಗುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರಿಗೆ ಕೋರ್ಟ್ ಸೂಚನೆ ನೀಡಿದೆ.

ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜನಪ್ರತಿನಿಧಿಗಳ ಸಮನ್ಸ್ ನೀಡಿದೆ.

Key words: CM Siddaramaiah- DCM -DK Shivakumar- court- Summons.