ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥನ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ್.

ಬೆಳ್ತಂಗಡಿ,ಮೇ,25,2024 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀಮಂಜುನಾಥನ ದರ್ಶನ ಪಡೆದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್  ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಸಿಎಂ‌ ಸಿದ್ದರಾಮಯ್ಯ ಡಿಸಿಎಂ  ಡಿ.ಕೆ.ಶಿವಕುಮಾರ್ ಗೆ ‌ ಸಚಿವರಾದ ಹೆಚ್ ಸಿ ಮಹದೇವಪ್ಪ, ಬೈರತಿ ಸುರೇಶ್, ಗೋವಿಂದ ರಾಜು ಸಾಥ್  ನೀಡಿದರು.  ಸಂಜೆ ಮಂಗಳೂರು ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಪಾಲ್ಗೊಳ್ಳಲಿದ್ದಾರೆ.

Key words: CM Siddaramaiah, DCM, DK Shivakumar, Dharmasthala