ಇಂದು ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಭೇಟಿ.

ಮೈಸೂರು,ಮೇ,25,2024 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ  ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥನ ದರ್ಶನ ಪಡೆಯಲಿದ್ದಾರೆ.

ಮೈಸೂರಿನಿಂದ ವಿಶೇಷ ವಿಮಾನ ಮೂಲಕ ಮಂಗಳೂರಿನತ್ತ ಪ್ರಯಾಣ ಬೆಳೆಸುವ ಸಿಎಂ ಮತ್ತು ಡಿಸಿಎಂ  ಮಂಗಳೂರಿನಿಂದ ರಸ್ತೆ ಮೂಲಕ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳದಲ್ಲಿ  ಶ್ರೀ ಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಂತರ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸಂಜೆ ಮಂಗಳೂರು ವಿಮಾನ ನಿಲ್ದಾಣ ಮೂಲಕ ಮೈಸೂರಿನತ್ತ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್  ಪ್ರಯಾಣ ಬೆಳೆಸಲಿದ್ದಾರೆ ಇಂದು ಸಿದ್ದರಾಮಯ್ಯ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.

Key words: CM-Siddaramaiah- DCM- DK Shivakumar- Dharmasthala