ಬೆಂಗಳೂರು,ಜುಲೈ,9,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿ ಪ್ರವಾಸ ಕೈಗೊಂಡಿದ್ದು ಇಬ್ಬರು ಸಚಿವರ ಜೊತೆ ದೆಹಲಿಗೆ ತೆರಳಿದ್ದಾರೆ.
ಸಚಿವರಾದ ಭೈರತಿ ಸುರೇಶ್ ಮತ್ತು ಕೆ.ಜೆ ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರ ಜೊತೆ ತೆರಳಿದ್ದು ಸಿಎಂ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವರನ್ನ ಭೇಟಿಯಾಗಿ ಚರ್ಚೆ ಮಾಡುವ ಸಾಧ್ಯತೆ ಇದೆ.
ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಕೇಂದ್ರ ಸಚಿವರನ್ನ ಭೇಟಿಯಾಗಿ ಎತ್ತಿನಹೊಳೆ ಯೋಜನೆ ಕುರಿತು ಚರ್ಚಿಸಿದ್ದರು. ಈ ಬೆನ್ನಲ್ಲೆ ಇದೀಗ ಸಿಎಂ ಸಿದ್ದರಾಮಯ್ಯ ಕೂಡ ದೆಹೆಲಿಗೆ ಹಾರಿದ್ದಾರೆ.
Key words: CM, Siddaramaiah, Delhi, Meet, Central Minister