Wednesday, August 12, 2026

BDA Apartments

Home Election 2024 ಸಿಎಂ ಸಿದ್ದರಾಮಯ್ಯ ಅವರಿದ್ದ ಹೆಲಿಕಾಪ್ಟರ್ ತಪಾಸಣೆ.

ಸಿಎಂ ಸಿದ್ದರಾಮಯ್ಯ ಅವರಿದ್ದ ಹೆಲಿಕಾಪ್ಟರ್ ತಪಾಸಣೆ.

ಕೋಲಾರ, ಏಪ್ರಿಲ್, 6, 2024 (www.justkannada.in):  ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಕೋಲಾರ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯಗೆ ಚುನಾವಣಾ ನೀತಿ ಸಂಹಿತೆ ಬಿಸಿ ತಟ್ಟಿದೆ.

ಸಿಎಂ ಸಿದ್ದರಾಮಯ್ಯ ಇಂದು ಕೋಲಾರ ಪ್ರವಾಸ ಕೈಗೊಂಡಿದ್ದು, ಸಿದ್ದರಾಮಯ್ಯ ಅವರಿದ್ದ ಹೆಲಿಕಾಪ್ಟರ್ ಅನ್ನು ಚುನಾವಣಾಧಿಕಾರಿಗಳು ತಪಾಸಣೆ  ನಡೆಸಿದ್ದಾರೆ.  ಸಿಎಂ ಸಿದ್ದರಾಮಯ್ಯ ಕೋಲಾರದ ಆರ್. ಎಲ್ ಜಾಲಪ್ಪ ಆಸ್ಪತ್ರೆ ಹೆಲಿಪ್ಯಾಡ್ ಗೆ ಬಂದಿದ್ದು ಈ ವೇಳೆ ಚುನಾವಣಾ ಅಧಿಕಾರಿಗಳು ಹೆಲಿಕಾಪ್ಟರ್ ತಪಾಸಣೆಗೊಳಪಡಿಸಿದರು ಎನ್ನಲಾಗಿದೆ.

ಇಂದು ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ  ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಮತಬೇಟೆಗಿಳಿಯಲಿದ್ದು, ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಲಿದ್ದಾರೆ.

Key words: CM, Siddaramaiah, helicopter, inspection