Monday, October 5, 2026

BDA Apartments

ವಿನೂತನ ಪ್ರಯತ್ನ: ಮೈಸೂರಿನಲ್ಲಿ ಪ್ರಸಾದದ ಬದಲು ಮಾಸ್ಕ್ ವಿತರಣೆ… BDA JK_Adv BDA Adv
Home Front Page ಸಿಎಂ ವಿರುದ್ದ ಸಿಬಿಐ ತನಿಖೆಗೆ ಕೋರಿ ಅರ್ಜಿ:  ಆದೇಶ ಕಾಯ್ದಿರಿಸಿದ ಹೈಕೋರ್ಟ್

ಸಿಎಂ ವಿರುದ್ದ ಸಿಬಿಐ ತನಿಖೆಗೆ ಕೋರಿ ಅರ್ಜಿ:  ಆದೇಶ ಕಾಯ್ದಿರಿಸಿದ ಹೈಕೋರ್ಟ್

 ಬೆಂಗಳೂರು,ಜನವರಿ,27,2025 (www.justkannada.in): ಸಿಎಂ ಸಿದ್ದರಾಮಯ್ಯ ವಿರುದ್ದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನ ಕಾಯ್ದಿರಿಸಿದೆ.ಸಿಎಂ ವಿರುದ್ದ ಸಿಬಿಐ ತನಿಖೆಗೆ ಕೋರಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್ ny...

ಮುಡಾ ಹಗರಣವನ್ನ ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಎರಡು ಕಡೆ ವಾದ ಪ್ರತಿವಾದ ಆಲಿಸಿ ನಂತರ ಆದೇಶವನ್ನ ಕಾಯ್ದಿರಿಸಿದೆ.

ದೂರುದಾರ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣಿಂದರ್ ಸಿಂಗ್ ವಾದ ಮಂಡಿಸಿದರು. ಹಾಗೆಯೇ ಲೋಕಾಯುಕ್ತ  ಪೊಲೀಸರಿಂದ  ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದೆ.  ಹೈಕೋರ್ಟ್ ಆದೇಶ ಪ್ರಕಟಿಸುವವರೆಗೂ ಗಡುವು ವಿಸ್ತರಣೆ ಮಾಡಿದೆ.

Key words: CBI, probe, against CM,  High Court, reserves, order