Thursday, August 6, 2026

BDA Apartments

Home Front Page ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದೆ ಭಂಡತನ ಪ್ರದರ್ಶನ- ಬಿವೈ ವಿಜಯೇಂದ್ರ ವಾಗ್ದಾಳಿ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದೆ ಭಂಡತನ ಪ್ರದರ್ಶನ- ಬಿವೈ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು,ಸೆಪ್ಟಂಬರ್,25,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಅರ್ಜಿ ವಜಾಗೊಳಿಸಿದರೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದೆ ಭಂಡತನ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯಗೆ ಗೊತ್ತಿಲ್ಲದೇ ಹಗರಣ ನಡೆದಿಲ್ಲ ಹೈಕೋರ್ಟ್ ತೀರ್ಪಿನಿಂದ ಸ್ಪಷ್ಟ. ಸಮಗ್ರ ತನಿಖೆ ಅಗತ್ಯವಿದೆ ಎಂದು  ಕೋರ್ಟ್ ಹೇಳಿದೆ. ಇಷ್ಟಾದರೂ ಸಿಎಂ ಭಂಡತನದಿಂದ ಹೊರಬರುತ್ತಿಲ್ಲ ಎಂದು ಕಿಡಿಕಾರಿದರು.

ಬಿಜೆಪಿ ರಾಜಭವನದ ವಿರುದ್ದ ಬಗ್ಗೆ ಮಾತನಾಡಿದ್ದಾರೆ.  ಮುಡಾ ಪ್ರಕರಣಧಲ್ಲಿ ಸಿಎಂ ಪಾತ್ರ ಇರುವುದು ಸಾಬೀತಾಗಿದೆ. ಆದರೆ ನಿನ್ನೆ ಸಿಎಂ ಸುದ್ದಿಗೋಷ್ಠಿ ನಡೆಸಿ ತಪ್ಪು ಮಾಡಿಲ್ಲ ಎಂದಿದ್ದಾರೆ. ಮೊದಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಬಿವೈ ವಿಜಯೇಂದ್ರ ಆಗ್ರಹಿಸಿದರು.

Key words: CM Siddaramaiah,  hypocrisy, esign, BY Vijayendra