ಮೈಸೂರಿನಲ್ಲಿ ಬಸವ ಜಯಂತಿ ಉದ್ಘಾಟಿಸಿದ ಸಿಎಂ ಸಿದ್ಧರಾಮಯ್ಯ: ‘ಶರಣ ದಂಪತಿಗಳು’ ಕೃತಿ ಬಿಡುಗಡೆ

ಮೈಸೂರು,ಅಕ್ಟೋಬರ್,7,2023(www.justkannada.in):  ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಬಸವ ಬಳಗಗಳ ಒಕ್ಕೂಟ ಮೈಸೂರು ಕಲಾಮಂದಿರದಲ್ಲಿ ಆಯೋಜಿಸಿದ್ದ ಬಸವ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಅರಣ್ಯ ಮತ್ತು ಪರಿಸರ ಸಚಿವ ಬಿ.ಈಶ್ವರ ಖಂಡ್ರೆ ಅವರು ವಹಿಸಿದ್ದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರು “12ನೇ ಶತಮಾನದ ಶರಣ ದಂಪತಿಗಳು” ಕೃತಿಯನ್ನು ಬಿಡುಗಡೆ ಮಾಡಿದರು. ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಬಸವೇಶ್ವರ ಪುತ್ಥಳಿ ದಾನ ಮಾಡಿದರು.

ಶಾಸಕರುಗಳಾದ ಮಾಜಿ ಸಚಿವ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಜಿ.ಡಿ.ಹರೀಶ್ ಗೌಡ, ಹೆಚ್.ಎಂ.ಗಣೇಶ್ ಪ್ರಸಾದ್, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಡಿ.ತಿಮ್ಮಯ್ಯ ಸೇರಿ ಮಾಜಿ ಶಾಸಕರು ಹಾಗೂ ನಾಯಕರುಗಳು ಉಪಸ್ಥಿತರಿದ್ದರು.

Key words: CM Siddaramaiah- inaugurates- Basava Jayanti – Mysore